| ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ.
| | |
| | ಬರಹಗಾರ: | ನಾಗರಾಜ್ megarajnaga |
ಸಮಯ: | 7/14/2008 7:58 PM | | | ಎಲ್ಲಾ ಮಿತ್ರರಿಗೂ ನನ್ನ ನಮಸ್ಕಾರಗಳು ನನ್ನ ಹೆಸರು ನಾಗರಾಜ್ ನಾನು ಸಮುದಾಯ ರೇಡಿಯೋದಲ್ಲಿ ಸುಮಾರು 6 ವರ್ಷಗಳ ಕಾಲ ಕೆಲಸ ನಿರ್ವಹಿಸಿ ಈಗ ನನ್ನ ಸ್ನೇಹಿತರ ಜೊತೆ "ಮರ" ಅನ್ನುವ ಸಂಸ್ಥೆಯನ್ನು ಪ್ರಾರಂಬಿಸಿದ್ದೇವೆ. ಮರ ಸಂಸ್ಥೆಯು ಮಾದ್ಯಮದೊಂದಿಗೆ ಕೆಲಸ ಮಾಡುತ್ತಿದೆ. ಜೊತೆಗೆ ರೇಡಿಯೋ ಆಕ್ಟೀವ್ 90.4 ರೇಡಿಯೋದಲ್ಲಿ ಪ್ರತಿ ದಿನ 1 ಗಂಟೆ ಕಾಲ ಕಾರ್ಯಕ್ರಮವನ್ನು ಸಹ ಮಾಡುತ್ತಿದ್ದೇನೆ. |
| ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ | |
| ನಾಗರಾಜ್ megarajnaga ಸಮಯ7/30/2008 5:17 PM | |
| ಎಲ್ಲರಿಗೂ ನಮಸ್ಕಾರ ಮೊನ್ನೆ ಅಂದರೆ 24ನೇ ತಾರೀಖು ಸಾಗರಕ್ಕೆ ಬೇಟಿ ನೀಡಿದ್ದೆ. ಬೆಂಗಳೂರಿನಿಂದ ರೈಲಿನಲ್ಲಿ ಶಿವಮೊಗ್ಗ ಎಕ್ಸ್ ಪ್ರೆಸ್ ನಲ್ಲಿ ಹೊರಟೆ ರೈಲು ಬೆಳಿಗ್ಗೆ 5:30ಗೆ ಹೋಗಬೇಕಾದದ್ದು 2 ಗಂಟೆ ತಡವಾಗಿ ಹೋಯಿತು, ಶಿವಮೊಗ್ಗ ಹತ್ತಿರ ಹೋಗುತ್ತಿದ್ದಾಗೆ ಜಿಟೆ ಜಿಟೆ ಮಳೆ ಬೀಳುತ್ತಿತ್ತು ಆ ಮಳೆಯಲ್ಲಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರೆ ಅದರ ಮಜಾನೆ ಬೇರೆ. ಶಿವಮೊಗ್ಗ 7:30 ಗಂಟೆಗೆ ತಲುಪಿದೆ ಅಲ್ಲಿಂದ ಸಾಗರದ ಕಡೆ ಪ್ರಯಾಣ ಬೆಳೆಸಿದೆ. ಸಾಗರ ಶಿವಮೊಗ್ಗ ಜಿಲ್ಲೆಯ ಒಂದು ಪಟ್ಟಣ ಮತ್ತು ಅದೇ ಹೆಸರಿನ ತಾಲೂಕಿನ ಆಡಳಿತ ಕೇಂದ್ರ. ಬೆಂಗಳೂರು ನಗರದಿಂದ 360 ಕಿ.ಮೀ ದೂರದಲ್ಲಿರುವ ಸಾಗರ ಪಟ್ಟಣವು ಮಲೆನಾಡು ಪ್ರದೇಶದ ವ್ಯಾಪ್ತಿಗೊಳಪಟ್ಟಿದೆ. ಮಳೆ ಹೆಚ್ಚಾಗಿ ಬೀಳುವ ಸಾಗರ ತಾಲೂಕು ಸಹಜವಾಗಿ ದಟ್ಟವಾದ ಕಾಡು ಮತ್ತು ವಿವಿಧ ರೀತಿಯ ಪ್ರಾಣಿಸಂಕುಲಗಳಿಗೆ ತವರಾಗಿದೆ. ಪ್ರಕೃತಿಪ್ರಿಯರಿಗೆ ಮತ್ತು ಚಾರಣಪ್ರಿಯರಿಗೆ ಸಾಗರ ಸ್ವರ್ಗ. ಶ್ರೀಗಂಧ ಕೆತ್ತನೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಸಾಗರವನ್ನು ಶ್ರೀಗಂಧದ ಗುಡಿ ಎಂದೂ ಕರೆಯಲಾಗುತ್ತದೆ. ಸಾಗರದಲ್ಲಿ ಬೆಳಗಿನ ತಿಂಡಿ ಮುಗಿಸಿ ಸಾಗರದಿಂದ ಹೆಗ್ಗೋಡುಗೆ ಹೊರಟೆ ಸಾಗರ ತಾಲೂಕಿನ ಜನ ಕಲಾರಸಿಕರು ಮತ್ತು ಸಾಹಿತ್ಯಾರಾಧಕರು. ಬಹಳ ಜನ ಕಲಾವಿದರನ್ನ, ಸಾಹಿತಿಗಳನ್ನ ರಾಜ್ಯಕ್ಕೆ ಸಾಗರ ತಾಲೂಕು ನೀಡಿದೆ. ಸಾಗರದ ೭ ಕಿ.ಮೀ ದೂರದಲ್ಲಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಕೆ.ವಿ.ಸುಬ್ಬಣ್ಣ ಕಟ್ಟಿ ಬೆಳೆಸಿದ ನೀನಾಸಂ (ನೀಲಕಂಠೇಶ್ ...
|  | | ಅಭಿಪ್ರಾಯ (3) |
ಮುಂದೆ ಓದಿ... |
| | ಕನ್ನಡ ಜನಪದ ಕಲೆಗಳು | |
| ನಾಗರಾಜ್ megarajnaga ಸಮಯ7/23/2008 5:52 PM | |
| ಜನಪದ ಸಾಹಿತ್ಯದಲ್ಲಿ ಗೀತೆಯೊಂದು ಪ್ರಮುಖ ಪ್ರಕಾರ. ಅದು ಮುಟ್ಟದ ವಸ್ತುವಿಲ್ಲ, ಸಂಸಾರದ ಮುಖಗಳೆಲ್ಲವೂ ಇಲ್ಲಿ ಚಿತ್ರಣಗೊಂಡಿವೆ. ತಾಯಿ ಮಗಳು, ಅತ್ತೆ ಸೊಸೆ, ಅಣ್ಣ ತಂಗಿ, ಅತ್ತಿಗೆ ನಾದಿನಿ ಮೈದುನರು, ಸವತಿ ಓರಗಿತ್ತಿಯರು, ಪತಿ ಪತ್ನಿಯರು, ತಂದೆ ಮಗ, ತವರು ಸೂಳೆಗಾರಿಕೆ, ಹೆಣ್ಣು ಜನ್ಮ, ಮಕ್ಕಳು ಮೊಮ್ಮಕ್ಕಳು, ಬಸಿರು ಬಯಕೆ, ಗೆಣೆಯ ಗೆಣೆತಿಯರು, ಸಾವು ನೋವು, ಬಾಣಂತಿತನ, ನೆಂಟರು, ಬಂಜೆತನ, ಪ್ರೇಮ ದ್ವೇಷ, ಮುನಿಸು ಜಗಳ ಹೀಗೆ ನೂರಾರು ಸಂಗತಿಗಳು ಇಡೀ ಹಳ್ಳಿಯ ಬದುಕಿನ ಉಸಿರು ಹಾಡಾಗಿ ಹೊಮ್ಮುತ್ತವೆ. ಹಾಡಿನ ಜೋಡಿಯಿಲ್ಲದೇ ಯಾವ ಕೆಲಸವೂ ಸಾಗುವುದಿಲ್ಲ. ಕುಟ್ಟುವುದು, ಬೀಸುವುದು, ಮೊಸರು ಕಡೆಯುವುದು, ಅಡಿಕೆ ಸುಲಿಯುವುದು, ಹಚ್ಚೆ ಹೊಯ್ಯುವುದು, ಮಗು ಮಲಗಿಸುವುದು, ಯಾವ ಕೆಲಸವೇ ಆಗಲಿ ಹಾಡು ಕಲಿತರೆ ಸರಾಗವಾಗಿ ಆಗುತ್ತದೆ. ಬೇಸಾಯ, ನೇಯ್ಗೆ ಮೊದಲಾದ ವೃತ್ತಿಗಳ, ಕುಣಿತಗಳ ಒಂದು ಅವಿಭಾಜ್ಯ ಅಂಗವಾಗಿ ಹಾಡು ಬರುತ್ತದೆ. ಬಿತ್ತನೆ ಮಾಡುವಾಗ, ಕೂರಿಗೆ ಹೊಡೆಯುವಾಗ, ನಾಟಿ ಹಾಕುವಾಗ, ಕಳೆ ಕೀಳುವಾಗ, ಹೊಲ ಕೊಯ್ಯುವಾಗ, ಕಾಳು ಒಕ್ಕುವಾಗ, ಮಣ್ಣು ಹೊರುವಾಗ, ಗಾಡಿ ಹೊಡೆಯುವಾಗ ಸಾಮೂಹಿಕವಾಗಿಯೊ, ವೈಯುಕ್ತಿಕವಾಗಿಯೊ ಗೀತಾಪ್ರವಾಹ ಹರಿಯಲೇ ಬೇಕು. ಹಬ್ಬ ಹರಿದಿನ ಮದುವೆಯೊಸಗೆ ಯಾವುದೇ ಶುಭಕಾರ್ಯವಾಗಲೀ ಶಾಸ್ತ್ರವೇ ಆಗಲೀ, ದೇವರಕಾರ್ಯವೇ ಆಗಲೀ ಹಾಡಿನಿಂದ ಮೊದಲಾಗಬೇಕು. ಹಾಡಿನಿಂದಲೇ ಅಂತ್ಯ ವಾಗಬೇಕು. ಬಹುತೇಕವಾಗಿ ಜನಪದಗೀತೆಗಳೆಲ್ಲ ಕ್ರಿಯಾತ್ಮಕವಾದುವು; ಯಾವುದಾದರೊಂದು ಕ ...
|  | | ಅಭಿಪ್ರಾಯ (3) |
ಮುಂದೆ ಓದಿ... |
| | ಸಂಕ್ರಾಂತಿ | |
| ನಾಗರಾಜ್ megarajnaga ಸಮಯ7/23/2008 5:44 PM | |
| ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ. ಈ ಶಾಸ್ತ್ರದಂತೆ, ಸೂರ್ಯನು ನಿರಯಣ ಮಕರರಾಶಿಯನ್ನು ಪ್ರವೇಶಿಸಿದಾಗ, "ಮಕರ ಸಂಕ್ರಾಂತಿ"ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವ ...
|  | | ಅಭಿಪ್ರಾಯ (1) |
ಮುಂದೆ ಓದಿ... |
| | ಕರ್ನಾಟಕದ ಜಾನಪದ | |
| ನಾಗರಾಜ್ megarajnaga ಸಮಯ7/23/2008 5:38 PM | |
| ಬೆಳಗಾಗಿ ನಾನೆದ್ದು ಯಾರ್ ಯಾರ ನೆನೆಯಾಲಿ ಎಳ್ಳು ಜೀರಿಗೆ ಬೆಳಿಯೋ ಭೂಮಿತಾಯಿ ಎದ್ದೊಂದು ಗಳಿಗೆ ನೆನೆದೇನು ಮಣ್ಣಲ್ಲಿ ಹುಟ್ಟೋಳೆ ಮಣ್ಣಾಲಿ ಬೆಳೆವೋಳೆ ಎಣ್ಣೇಲಿ ಕಣ್ಣಾಬಿಡುವೋಳೆ, ಜಗಜ್ಯೋತಿ ಸತ್ಯಾದಿಂದುರಿಯೆ ನಮಗಾಗಿ ತೊಟ್ಟಿಲು ಹೋತ್ಕೊಂಡು ತವರ್ಬಣ್ಣ ಉಟ್ಕೊಂಡು ಅಪ್ಪ ಕೊಟ್ಟೆಮ್ಮೆ ಹೋಡ್ಕೊಂಡು | ತೌರೂರ ತಿಟ್ಟಹತ್ತಿ ತಿರುಗಿ ನೋಡ್ಯಾಳೊ ಹೂಮಾಲೆಯಂಥ ಮೇಲಿನ ಸಾಲುಗಳನ್ನು ಯಾರು ಯಾವಾಗ ಬರೆದರೋ ಗೊತ್ತಿಲ್ಲ, ಇವು ನೂರಾರು ವರ್ಷಗಳಿಂದ ಸಾವಿರಾರು ಜನಗಳ ಬಾಯಿಂದ ಹರಿದು ಬಂದ ನುಡಿಗಳು, ನಮ್ಮ ಹಳ್ಳಿಗಳಲ್ಲಿ ಕಲೋಪಾಸಕತ್ವವನ್ನು, ಸೃಜನಶೀಲತೆಯನ್ನು, ಮತ್ತು ಮಾಧುರ್ಯವನ್ನು ಹಳ್ಳಿಗರಿಗೆ ತಿಳಿಯದಂತೆ ಅವರ ಜೀವನ ವಿಧಾನವನ್ನಾಗಿ ಪರಿವರ್ತಿಸಿದ ಸಂಸ್ಕೃತಿಯೊಂದರ ಹೆಜ್ಜೆಗುರುತುಗಳು. ಪ್ರಾಯಶಃ ಸಹಸ್ರಾರು ವರ್ಷದ ಹಿಂದೆ ಜಗತ್ತಿನಲ್ಲೆಲ್ಲ ಇದ್ದುದ್ದು ಜಾನಪದವೊಂದೇ, ಮಾನವನು ತಾನು ಮಾಡುವ ಕೆಲಸಗಳಲ್ಲೆಲ್ಲಾ ತನ್ಮಯತೆಯನ್ನು ತುಂಬಲು ಮಾಡಿದ ಪ್ರಯತ್ನಗಳ ಸರಮಾಲೆಯೇ ಜಾನಪದವಾಗಿರಬಹುದು. ತನ್ನ ಸುತ್ತಲಿನ ಪರಿಸ್ಥಿತಿಗೆ ತಕ್ಕಂತೆ ತಂತ್ರಜ್ಞಾನಗಳನ್ನೂ, ಅರೋಗ್ಯ ರಕ್ಷಣೆಗೆ ವೈದ್ಯಕೀಯವನ್ನು, ಪ್ರಕೃತಿಯ ಬಿರುಸಿಗೆ ಉತ್ತರವಾಗಿ ಭಕ್ತಿಯನ್ನೂ ಬೆಳೆಸಿಕೊಂಡಿರಬಹುದು. ಜನಪದ ಮತ್ತು ಜಾನಪದ ಎಂಬ ಶಬ್ದಗಳು ಒಂದು ಸಾಮಾಜಿಕ ವ್ಯವಸ್ಥೆಯನ್ನು ಸೂಚಿಸುತ್ತವೆ. ಪ್ರತಿಯೊಂದು ಸಾಮಾಜವೂ ತನ್ನ ಪುರಾತನರ ಸಾರವನ್ನು ಹೀರಿ ತನ್ನ ...
|  | | ಅಭಿಪ್ರಾಯ (2) |
ಮುಂದೆ ಓದಿ... |
| | ಜನಪದ ಕ್ರೀಡೆಗಳು | |
| ನಾಗರಾಜ್ megarajnaga ಸಮಯ7/22/2008 6:19 PM | |
| ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿರುವುದು.
ಲಗೋರಿ ಲಗೋರಿ !!! ಅಂತ ಕಿರುಚಿದಾಗ ಮೈ ಎಲ್ಲ ಜುಮ್ ಅನ್ನುವುದು. ನಮ್ಮ ನಾಡಿನಲ್ಲಿ ಹಲವಾರು ವರ್ಷಗಳಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ಸಾಯಂಕಾಲ ಎಲ್ಲರೂ ಜೊತೆಗೂಡಿ ಆಡುತ್ತಿದ್ದ ಆಟ ಲಗೋರಿ. ಈಗ ಲಗೋರಿ ಆಡುವವರು ಅತಿ ಕಡಿಮೆ, ಗ್ರಾಮ್ಯ ಪ್ರದೇಶಗಳಲ್ಲಿ ಮಾತ್ರ ಸಿಗುವವರು. ಈ ಆಟವನ್ನು ಇಬ್ಬರಿಗಿಂತ ಹೆಚ್ಚಾಗಿ ಎಷ್ಟು ಜನರು ಕೂಡ ಆಡಬಹುದು. ಅವರನ್ನು ಎರಡು ತಂಡಗಳಲ್ಲಿ ವಿಭಜಿಸಿವವರು. ಮೊದಲನೆಯ ತಂಡದವರು ೭ ರಿಂದ ೯ ಕಲ್ಲುಗಳನ್ನು ಒಂದರ ಮೇಲೊಂದು ಜೋಡಿಸುವರು. ಹಾಗೆ ಜೋಡಿಸಿದ ಕಲ್ಲುಗಳಿಗೆ ಸ್ವಲ್ಪದೂರದಿಂದ ಮತ್ತೊಂದು ತಂಡದವರು ಒಂದು ಚೆಂಡನ್ನು ಎಸೆಯುವರು. ಆ ಚೆಂಡು ತಾಗಿ ಕಲ್ಲುಗಳು ಚದುರಿದಾಗ, ಮೊದಲನೆಯ ತಂಡದವರು ಅದನ್ನು ಮತ್ತೆ ಯಥಾಸ್ಥಿತಿಗೆ ತರಲು ಪ್ರಯತ್ನಿಸುವರು. ಅದನ್ನು ತಡೆಯುವುದೇ ಎದುರಾಳಿ ತಂಡದ ಗುರಿ. ಮೊದಲನೆಯ ತಂಡದವರು ಆ ಕಲ್ಲುಗಳನ್ನು ಜೋಡಿಸುವ ಪ್ರಯತ್ನದಲ್ಲಿರುವಾಗ ಎದುರಾಳಿ ತಂಡದವರು ಆ ಚೆಂಡನ್ನು ಯಾರೊಬ್ಬರಿಗೆ ತಾಗುವಂತೆ ಎಸೆದರೆ, ತಾಗಿದಾತ ಆಟದಿಂದ ಹೊರಗೆ ಹೋಗುತ್ತಾನೆ. ಹೀಗೆ ಎದುರಾಳಿಯ ಪ್ರತಿಯೊಬ್ಬರನ್ನು ಆಟದಿಂದ ಹೊರ ಕಳುಹಿಸುವುದೇ ಆಟದ ಗುರಿ. ಈ ಸಮಯದಲ್ಲಿ ಎದುರಾಳಿ ತಂಡವೇನಾ ...
|  | | ಅಭಿಪ್ರಾಯ (0) |
ಮುಂದೆ ಓದಿ... |
| | ಗಾದೆಗಳು | |
| ನಾಗರಾಜ್ megarajnaga ಸಮಯ7/22/2008 6:08 PM | |
| ಗಾದೆಗಳು ಹೇಗೆ, ಎಲ್ಲಿ, ಯಾವಾಗ ಹುಟ್ಟಿಕೊಂಡದ್ದು ಎಂದು ಬಲ್ಲವರಾರು? ಇವು ಜನರ ಬಾಯಿಂದ-ಬಾಯಿಗೆ, ತಲೆಮಾರಿನಿಂದ-ತಲೆಮಾರಿಗೆ ಹಬ್ಬುವ ನುಡಿಗಟ್ಟುಗಳು. ಎಲ್ಲ ಗಾದೆಗಳು ಸತ್ಯ ವಾಕ್ಯವನ್ನು ಅರುಹುತ್ತವೆ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು. ಅಟ್ಟ ಹಾರದ ಬೆಕ್ಕು ಬೆಟ್ಟ ಹಾರೀತೇ? ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ಯೇ? ಗಾಣಿಗ ಅಯ್ಯೋ ಅಂದರೆ ನೆತ್ತಿ ತಣ್ಣಗಾಗುತ್ತದೆಯೇ? ಸೆಗಣಿಯವನ ಜೊತೆ ಸರಸಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು. ತುಪ್ಪ ಅಳೆಯೋ ಕೈ ಜಿಡ್ಡಾಗೋದಿಲ್ವೇ? ಅಂಗೈ ಹುಣ್ಣಿಗೆ ಕನ್ನಡಿ ಏಕೆ? ಆಕಾಶ ನೋಡಲು ನೊಕುನುಗ್ಗಲೇಕೆ? ವೇದಾಂತ ಹೇಳಕ್ಕೆ ಬದನೇಕಾಯಿ ತಿನ್ನಕ್ಕೆ! 'ಹೋದೆಯಾ ಪಿಶಾಚಿ' ಎಂದರೆ 'ಬಂದೆ ಗವಾಕ್ಷೀಲಿ' ಅಂತಂತೆ! ಬೆಳೆಯುವ ಸಿರಿ ಮೊಳಕೇಲಿ! ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರದು. ಬಡವನ ಸಿಟ್ಟು ದವಡೆಗೆ ಮೊಲ. ಆಕಳು ಕಪ್ಪಾದರೆ ಹಾಲು ಕಪ್ಪೇ! ಓದು ಒಕ್ಕಾಲು ಬುಧ್ಧಿ ಮುಕ್ಕಾಲು. ಇದ್ದುದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಒದ್ದರಂತೆ! ಕಂಡದ್ದನ್ನು ಆಡಿದರೆ ಕೆಂಡದಂಥ ಕೋಪ. ನಾಯಿ ಬಾಲ ಡೊಂಕು. ಬೆಕ್ಕಿಗೆ ಚೆಲ್ಲಾಟ;ಇಲಿಗೆ ಪ್ರಾಣಸಂಕಟ. ಹಾಸಿಗೆ ಇದ್ದಷ್ಟು ಕಾಲು ಚಾಚು. ನವಿಲು ಕುಣೀತೂಂತ ಕೆಂಬೂತ ಕುಣೀತಂತೆ! ಬೀಸೊ ದೊಣ್ಣೆ ತಪ್ಪಿದರೆ ಸಾವಿರ ವರ್ಷ ಆಯಸ್ಸು. ಕುಂಬಾರನಿಗೆ ವರುಷ, ದೊಣ್ಣೆಗೆ ನ ...
|  | | ಅಭಿಪ್ರಾಯ (1) |
ಮುಂದೆ ಓದಿ... |
| | ಓಡೆಯರ್ | |
| ನಾಗರಾಜ್ megarajnaga ಸಮಯ7/22/2008 4:16 PM | |
| ಮೈಸೂರು ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎ೦ದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅ೦ಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿ೦ದಿನ ಮೈಸೂರು ಸ೦ಸ್ಥಾನದ ವೊಡೆಯರ್ ವ೦ಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಒಡೆಯರ್ ವ೦ಶ 1399 ರಿ೦ದ 1947 ರ ವರೆಗೆ ಮೈಸೂರು ಸ೦ಸ್ಥಾನವನ್ನು ಆಳಿದ ರಾಜವ೦ಶ. 1947 ರಲ್ಲಿ ಭಾರತದ ಸ್ವಾತ೦ತ್ರ್ಯಾನ೦ತರ ಭಾರತ ಗಣರಾಜ್ಯಕ್ಕೆ ಮೈಸೂರು ಸ೦ಸ್ಥಾನ ಸೇರಿದ ನ೦ತರ ಒಡೆಯರ್ ವ೦ಶದ ಆಡಳಿತ ಕೊನೆಗೊ೦ಡಿತು. ಒಡೆಯರ್ ಎನ್ನುವ ಪದದ ಮೂಲ ಒಡೆಯ. ಒಡೆಯರ್ ವ೦ಶದ ಸ್ಥಾಪಕ ವಿಜಯ, ದ್ವಾರಕೆಯಿ೦ದ ಮೈಸೂರಿಗೆ ಬ೦ದನೆ೦ದು ಹೇಳಲಾಗುತ್ತದೆ. ವಿಜಯ ನ೦ತರ ದೇವ ರಾಯ ಎ೦ಬ ಹೆಸರನ್ನು ಪಡೆದು 1399 ರಿ೦ದ 1423 ರ ವರೆಗೆ ಮೈಸೂರನ್ನು ಆಳಿದನು. ಆಗಿನ ಕಾಲದಲ್ಲಿ ಮೈಸೂರು ಇನ್ನೂ ಚಿಕ್ಕ ಪಟ್ಟಣ. ಮು೦ದಿನ ಎರಡು ಶತಮಾನಗಳ ಕಾಲ ಮೈಸೂರು ಸ೦ಸ್ಥಾನ ಒಡೆಯರ್ ವ೦ಶದ ಅನೇಕ ಅರಸರಿ೦ದ ಆಳಲ್ಪಟ್ಟಿತು. ಆದರೆ ಈಗಿನ ಕಾಲದಲ್ಲಿ ಮೈಸೂರು ಸ೦ಸ್ಥಾನ ಸ್ವತ೦ತ್ರ ರಾಜ್ಯವಾಗಿರಲಿಲ್ಲ. ವಿಜಯನಗರ ಸಾಮ್ರಾಜ್ಯದ ಭಾಗವಾಗಿದ್ದು ಮೈಸೂರಿನ ಅರಸರು ವಿಜಯನಗರದ ಸಾಮ೦ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿಜಯನಗರ ಸಾಮ್ರಾಜ್ಯ 1569 ರಲ್ಲಿ ಪತನಗೊ೦ಡಿತು. ಆಗ ಉ೦ಟಾದ ಅವಕಾಶಗಳ ಲಾಭ ಪಡೆದು ಅ೦ದಿನ ಮೈಸೂರು ಅರಸನಾದ ರಾಜ ಒ ...
|  | | ಅಭಿಪ್ರಾಯ (0) |
ಮುಂದೆ ಓದಿ... |
| | ಮೈಸೂರು ಹುಲಿ ಟಿಪ್ಪು | |
| ನಾಗರಾಜ್ megarajnaga ಸಮಯ7/21/2008 8:43 PM | |
| ಟೀಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟೀಪು ಸುಲ್ತಾನ್ 1782 ರಿಂದ ಮೈಸೂರು ಸಂಸ್ಥಾನದ ರಾಜ, ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟೀಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಟೀಪು ಸೇನಾ ತಂತ್ರಗಳನ್ನು ತನ್ನ ತಂದೆ, ಹೈದರಾಲಿಯೊಂದಿಗೆ ಇದ್ದ ಫ್ರೆಂಚ್ ಅಧಿಕಾರಿಗಳಿಂದ ಪಡೆದನು. 1767 ರ ಕರ್ನಾಟಕ ಯುದ್ಧದಲ್ಲಿ ಒಂದು ಅಶ್ವದಳದ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದನು. ಸೇನಾನಾಯಕನಾಗಿ ಟೀಪು ಪ್ರಸಿದ್ದಿ ಪಡೆದದ್ದು 1775/79 ರ ಆಂಗ್ಲೋ-ಮರಾಠಾ ಯುದ್ಧದಲ್ಲಿ. 15 ನೆ ವಯಸ್ಸಿನಲ್ಲಿ ತನ ತಂದೆ ಹೈದರಾಲಿಯ ಜೊತೆ ಪ್ರಥಮ ಮೈಸೂರು ಯುದ್ಧದಲ್ಲಿ ಭಾಗವಹಿಸಿ, ಒಂದು ದೊಡ್ಡ ಸೇನಾ ತುಕಡಿಯ ನಾಯಕನಾಗಿ 1782 ರ ಫೆಬ್ರವರಿಯಲ್ಲಿ ಆಂಗ್ಲ ಸೇನಾನಾಯಕ ಬ್ರಾತ್‍ವೈಟ್‍ನನ್ನು ಸೋಲಿಸಿದನು. ಐದು ವರ್ಷಗಳ ನಂತರ ಎರಡನೇ ಮೈಸೂರು ಯುದ್ಧ ಆರಂಭವಾಯಿತು. ಈ ಯುದ್ಧದಲ್ಲಿ ಬ್ರಿಟಿಷರು ಸೋತರೂ ಅವರಿಂದ ಭಾರತದ ಸ್ವಾತಂತ್ರ್ಯಕ್ಕಿರುವ ಅಪಾಯವನ್ನು ಟೀಪು ಮನಗಂಡನು. 1782 ರಲ್ಲಿ ಹೈದರಾಲಿಯ ನಿಧನದ ನಂತರಇದರ ಪರಿಣಾಮ ಮೂರನೇ ಮೈಸೂರು ಯುದ್ಧ - ಇದರಲ್ಲಿ ಮೈಸೂರು ಸಂಸ್ಥಾನ ಬಲವಾಗಿ ಸೋತಿತು; ಇದೇ ಸಮಯದಲ್ಲಿ ಫ್ರಾನ್ಸ್ ದೇಶದಲ್ಲಿ ಕ್ರಾಂತಿ ಆರಂಭವಾಗಿ ಫ್ರಾನ್ಸ್ ದೇಶವು ಟೀಪುವಿನ ನೆರವಿಗೆ ಬರಲಾಗಲಿಲ್ಲ. ಟೀಪು ಸುಲ್ತಾನನಾದ ಮೇಲೆ ಬ್ರಿಟಿಷರ ಮುನ್ನಡೆಯನ್ನು ತಡೆಯಲ ...
|  | | ಅಭಿಪ್ರಾಯ (2) |
ಮುಂದೆ ಓದಿ... |
| | ಮಾಸ್ತಿ ಕನ್ನಡ ಆಸ್ತಿ | |
| ನಾಗರಾಜ್ megarajnaga ಸಮಯ7/18/2008 11:53 PM | |
| ಎಲ್ಲರಿಗೂ ನನ್ನ ಅನಂತನಂತ ನಮಸ್ಕಾರಗಳು ನನ್ನ ಬರಹದಲ್ಲಿ ಏನಾದರು ಬದಲಾವಣೆಗಳನ್ನು ಮಾಡಬೇಕಾಗಿ ಇದ್ದಲ್ಲಿ ಮಾದಬೇಕಾಗಿ ತಿಳಿಸುತ್ತಾ, ಮತ್ತು ಅನಿಸಿಕೆಗಳನ್ನು ವ್ಯಕ್ತಪಡಿಸಬೇಕಾಗೆ ಮನವಿಯನ್ನು ಮಾಡುತ್ತಾ ನಾನು ಜನಿಸಿದ ತಾಲ್ಲೂಕಿಗೆ ಪಕ್ಕದಲ್ಲಿರುವಾ, ಅದರಲ್ಲೂ ನನ್ನ ಹುಟ್ಟೂರಿಗೆ ಸುಮಾರು 10 ಕಿ,ಮೀ ದೂರದಲ್ಲಿ ಜನಿಸಿದ ಮಾಸ್ತಿ ವೆಂಕಟೇಶ ಅಯ್ಯಂಗಾರ ಬಗ್ಗೆ ಬರೆಯುತ್ತಾ ಇದ್ದೇನೆ. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಹಳ್ಳಿಯಲ್ಲಿ 1891ರ ಜೂನ್ 6 ರಂದು ಹುಟ್ಟಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿ ಗಳಿಸಿ ...
|  | | ಅಭಿಪ್ರಾಯ (0) |
ಮುಂದೆ ಓದಿ... |
| | ರಾಷ್ಟ್ರ ಕವಿ ಕುವೆಂಪು | |
| ನಾಗರಾಜ್ megarajnaga ಸಮಯ7/17/2008 7:10 PM | |
| ಪ್ರಿಯ ಓದುಗರಿಗೆ ನನ್ನ ಅನಂತ ನಮಸ್ಕಾರಗಳು ನೀವು ಕುವೆಂಪುರವರ ಬಗ್ಗೆ ಹಲವಾರು ವಿಚಾರಗಳನ್ನು ತಿಳಿದುಕೊಂಡಿರುತ್ತೀರಾ. ನಾನು ರೇಡಿಯೋ ಕಾರ್ಯಕ್ರಮದ ಪ್ರಯುಕ್ತ ರಾಷ್ಟ್ರ ಕವಿ ಕುವೆಂಪುರವರ ಬಗ್ಗೆ ಸಂಗ್ರಹಿಸಿದ ಮಾಹಿತಿಯನ್ನು ಲೇಖನವಾಗಿ ಬರಿಯುತ್ತಾ ಇದ್ದೇಶ ನಿಮ್ಮ ಅನಿಸಿಕೆಗಳನ್ನು ತಪ್ಪದೇ ತಿಳಿಸಿ. ಹಾಗೂ ಏನಾದರು ಬದಲಾವಣೆಗಳು ಇದ್ದರೆ ದಯವಿಟ್ಟು ಸರಿಪಡಿಸಿ, ಕುವೆಂಪು - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಡಿಸೆಂಬರ್ 29, 1904, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾದರು. ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. 1955 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ...
|  | | ಅಭಿಪ್ರಾಯ (2) |
ಮುಂದೆ ಓದಿ... |
|
| | |
|
|  | ಸದಸ್ಯತ್ವ: |  | ಇತ್ತೀಚಿನ ಸದಸ್ಯರು:tharakeshwar |  | ಇಂದಿನ ಹೊಸ ಸದಸ್ಯರು:0 |  | ನೆನ್ನೆಯ ಹೊಸ ಸದಸ್ಯರು:1 |  | ಒಟ್ಟು:194 |
 | ಆನ್‌ಲೈನ್ ಇರುವ ಸದಸ್ಯರು: |  | ಅತಿಥಿಗಳು:4 |  | ಸದಸ್ಯರು:0 |  | ಒಟ್ಟು:4 |
ಈಗ ಆನ್‌ಲೈನ್ ಇರುವವರು:
|
| | |
|