ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ
ಸ್ಥಳ: ಬ್ಲಾಗ್ಸ್ನನಗೆ ತೋಚಿದ್ದು   
ಬರಹಗಾರ: ನಾಗರಾಜ್ megarajnaga7/30/2008 5:17 PM
ಎಲ್ಲರಿಗೂ ನಮಸ್ಕಾರ ಮೊನ್ನೆ ಅಂದರೆ 24ನೇ ತಾರೀಖು ಸಾಗರಕ್ಕೆ ಬೇಟಿ ನೀಡಿದ್ದೆ. ಬೆಂಗಳೂರಿನಿಂದ ರೈಲಿನಲ್ಲಿ ಶಿವಮೊಗ್ಗ ಎಕ್ಸ್ ಪ್ರೆಸ್ ನಲ್ಲಿ ಹೊರಟೆ ರೈಲು ಬೆಳಿಗ್ಗೆ 5:30ಗೆ ಹೋಗಬೇಕಾದದ್ದು 2 ಗಂಟೆ ತಡವಾಗಿ ಹೋಯಿತು, ಶಿವಮೊಗ್ಗ ಹತ್ತಿರ ಹೋಗುತ್ತಿದ್ದಾಗೆ ಜಿಟೆ ಜಿಟೆ ಮಳೆ ಬೀಳುತ್ತಿತ್ತು ಆ ಮಳೆಯಲ್ಲಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರೆ ಅದರ ಮಜಾನೆ ಬೇರೆ. ಶಿವಮೊಗ್ಗ 7:30 ಗಂಟೆಗೆ ತಲುಪಿದೆ ಅಲ್ಲಿಂದ ಸಾಗರದ ಕಡೆ ಪ್ರಯಾಣ ಬೆಳೆಸಿದೆ. ಸಾಗರ ಶಿವಮೊಗ್ಗ ಜಿಲ್ಲೆಯ ಒಂದು ಪಟ್ಟಣ ಮತ್ತು ಅದೇ ಹೆಸರಿನ ತಾಲೂಕಿನ ಆಡಳಿತ ಕೇಂದ್ರ. ಬೆಂಗಳೂರು ನಗರದಿಂದ 360 ಕಿ.ಮೀ ದೂರದಲ್ಲಿರುವ ಸಾಗರ ಪಟ್ಟಣವು ಮಲೆನಾಡು ಪ್ರದೇಶದ ವ್ಯಾಪ್ತಿಗೊಳಪಟ್ಟಿದೆ. ಮಳೆ ಹೆಚ್ಚಾಗಿ ಬೀಳುವ ಸಾಗರ ತಾಲೂಕು ಸಹಜವಾಗಿ ದಟ್ಟವಾದ ಕಾಡು ಮತ್ತು ವಿವಿಧ ರೀತಿಯ ಪ್ರಾಣಿಸಂಕುಲಗಳಿಗೆ ತವರಾಗಿದೆ. ಪ್ರಕೃತಿಪ್ರಿಯರಿಗೆ ಮತ್ತು ಚಾರಣಪ್ರಿಯರಿಗೆ ಸಾಗರ ಸ್ವರ್ಗ. ಶ್ರೀಗಂಧ ಕೆತ್ತನೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಸಾಗರವನ್ನು ಶ್ರೀಗಂಧದ ಗುಡಿ ಎಂದೂ ಕರೆಯಲಾಗುತ್ತದೆ. ಸಾಗರದಲ್ಲಿ ಬೆಳಗಿನ ತಿಂಡಿ ಮುಗಿಸಿ ಸಾಗರ‌ದಿಂದ ಹೆಗ್ಗೋಡುಗೆ ಹೊರಟೆ ಸಾಗರ ತಾಲೂಕಿನ ಜನ ಕಲಾರಸಿಕರು ಮತ್ತು ಸಾಹಿತ್ಯಾರಾಧಕರು. ಬಹಳ ಜನ ಕಲಾವಿದರನ್ನ, ಸಾಹಿತಿಗಳನ್ನ ರಾಜ್ಯಕ್ಕೆ ಸಾಗರ ತಾಲೂಕು ನೀಡಿದೆ. ಸಾಗರದ ೭ ಕಿ.ಮೀ ದೂರದಲ್ಲಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಕೆ.ವಿ.ಸುಬ್ಬಣ್ಣ ಕಟ್ಟಿ ಬೆಳೆಸಿದ ನೀನಾಸಂ (ನೀಲಕಂಠೇಶ್ವರ ನಾಟ್ಯ ಸಂಘ) ತನ್ನ ತಿರುಗಾಟಗಳಿಂದಾಗಿ ಬಹು ಪ್ರಸಿದ್ದಿಯನ್ನು ಪಡೆದಿದೆ ನಾನು ಇದೇ ನೀನಾಸಂ ನಲ್ಲಿ ಉಳಿದುಕೊಂಡೆ ಅಲ್ಲಿ 20 ಜನ ಇದ್ಯಾರ್ಥಿಗಳು ಓದುತ್ತಿದ್ದರು ಅಂದರೆ ರಂಗಭೂಮಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಅಲ್ಲಿ ಹೋಗುತ್ತಿದ್ದಾಗೆ ಜಿಟಿ ಜಿಟಿ ಮಳೆ ಬೀಳುತ್ತಿದ್ದರಿಂದ ಹಾಗೂ ಮಳೆಯಲ್ಲಿ ನೆಂದಿದ್ದರಿಂದ ಒಂದು ಕಪ್ ಕಶಾಯ ಕುಡಿದು ವಿಶ್ರಾಂತಿಗೆ ಹೊರಟೆ. ರಾತ್ರಿ ವಿದ್ಯಾರ್ಥಿಗಳು ಯಕ್ಷಗಾನ ಕಳೆಯುತ್ತಿದ್ದರು.ಯಕ್ಷಗಾನ ಸಾಗರ ತಾಲೂಕಿನಲ್ಲಿ ಬಹಳ ಪ್ರಸಿದ್ಧವಾದ ಕಲಾಪ್ರಕಾರ. ಬೇಸಿಗೆಯ ಕಾಲದಲ್ಲಿ ಪ್ರತಿದಿನವೂ ಒಂದಿಲ್ಲೊಂದು ಯಕ್ಷಗಾನ ಮೇಳದ ಪ್ರದರ್ಶನ ಏರ್ಪಾಡಾಗಿರುವುದನ್ನು ಕಾಣಬಹುದು.ಅದನ್ನು ನೋಡುತ್ತಾ ಕಾಲ ಕಳೆದು ಮತ್ತೆ ಊಟ ಮುಗಿಸಿ ಕೊಠಡಿಗೆ ಹೋಗಿ ಮಲಗಿದೆ. ಬೆಳಿಗ್ಗೆ ಎದ್ದು ನೀನಾಸಂ ಬಗ್ಗೆ ತಿಳಿದುಕೊಂಡು ನಂತರ ಒಮ್ಮೆ ಸುತ್ತಿ ಅಲ್ಲಿಂದ ಸುತ್ತಲು ಹೊರಟೆ.
ಅಲ್ಲಿಂದ ಜೋಗ್ ನೋಡಲು ಹೋದೆ ಭಾರತದಲ್ಲೇ ಅತ್ಯಂತ ಎತ್ತರವಾದ ಮತ್ತು ಜಗತ್ತಿನಲ್ಲಿ 27ನೆಯ ಸ್ಥಾನದಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತವು ಸಾಗರದಿಂದ 29 ಕಿ.ಮೀ ಅಂತರದಲ್ಲಿದೆ. ಶರಾವತಿ ನದಿಯು ರಾಜ, ರೋರರ್, ರಾಕೆಟ್ ಮತ್ತು ರಾಣಿ ಎಂಬ ನಾಲ್ಕು ಕವಲುಗಳಾಗಿ 273ಮೀ ಎತ್ತರದಿಂದ ದುಮುಕುವ ಜೋಗ ಜಲಪಾತಕ್ಕೆ ಸಾಗರದಿಂದ ಪ್ರತೀ 5 ನಿಮಿಷಕ್ಕೆ ಒಂದರಂತೆ ಬಸ್ಸಿನ ವ್ಯವಸ್ಥೆ ಇದೆ.
ಅಲ್ಲಿಂದ ಇಕ್ಕೇರಿ ಹೋರಟೆ, ಇಕ್ಕೇರಿ ಹೊಯ್ಸಳ ಶೈಲಿಯ ಸುಂದರವಾದ ಕೆತ್ತನೆಗಳಿರುವ ಕೆಳದಿ ಸಂಸ್ಥಾನಕ್ಕೆ ಸೇರಿದ ದೇವಸ್ಥಾನವಿರುವ ಇಕ್ಕೇರಿ ಪಟ್ಟಣ ಸಾಗರದಿಂದ 5 ಕಿ.ಮೀ. ದೂರದಲ್ಲಿದೆ. ಬಸ್ಸು, ಟ್ಯಾಕ್ಸಿ ಅಥವ ಆಟೋಗಳಿಂದ ಸುಲಭವಾಗಿ ಇಕ್ಕೇರಿಯನ್ನು ತಲುಪಬಹುದು.
ಮಾರನೆದಿನ ಕೆಳದಿ ಕಡೆ ಹೋದೆ ಕೆಳದಿ ರಾಜವಂಶದಿಂದ ಪ್ರಸಿದ್ಧವಾದ ಕೆಳದಿ ಪಟ್ಟಣವು ಸಾಗರದಿಂದ 7 ಕಿ.ಮೀ ದೂರದಲ್ಲಿದೆ. ಕೆಳದಿ ಸಂಸ್ಥಾನದ ಅರಮನೆ, ಸುಂದರ ಕೆತ್ತನೆಗಳಿರುವ ದೇವಸ್ಥಾನ ಮತ್ತು ಐತಿಹಾಸಿಕ ವಸ್ತುಸಂಗ್ರಹಾಲಯ ಈ ಊರಿನ ಆಕರ್ಷಣೆಗಳು.
ಸಾಗರದ ಜನ ಸಾಮಾನ್ಯವಾಗಿ ಶಾಂತಿಪ್ರಿಯರು ಮತ್ತು ಸ್ನೇಹಪ್ರಿಯರು. ಹೆಚ್ಚಿನ ಜನರು ಜೀವನಕ್ಕೆ ವ್ಯವಸಾಯವನ್ನ ಅವಲಂಬಿಸಿದ್ದಾರೆ. ಅಡಿಕೆ ಸಾಗರದ ಪ್ರಮುಖ ಬೆಳೆ. ಭತ್ತ, ಕಬ್ಬು, ವೆನಿಲ್ಲಾ ಮತ್ತಿತರ ಬೆಳೆಗಳು ಕೂಡ ಪ್ರಚಲಿತದಲ್ಲಿವೆ. ಬಹುಪಾಲು ಜನರು ಹವ್ಯಕರಾದ್ದರಿಂದ ಸಹಜವಾಗಿ ಸಾಗರದಲ್ಲಿ ಹವ್ಯಕ ಕನ್ನಡ ಚಾಲ್ತಿಯಲ್ಲಿದೆ.
ಬೆಂಗಳೂರು ನಗರದಿಂದ ನೇರವಾಗಿ ಬಸ್ಸು ಸಂಪರ್ಕವಿದೆ ರಾ.ಹೆ.206 ರಲ್ಲಿ ಚಲಿಸುವ ಖಾಸಗಿ ಮತ್ತು ಸರ್ಕಾರಿ ಹವಾನಿಯಂತ್ರಿತ ಬಸ್ಸುಗಳಲ್ಲಿ 8 ಗಂಟೆಗಳ ಅವಧಿಯಲ್ಲಿ ಸಾಗರ ತಲುಪಬಹುದು. ಇದಲ್ಲದೆ ರಾಜ್ಯದ ಇತರ ಪ್ರಮುಖ ಪಟ್ಟಣಗಳು ಮತ್ತು ಮುಂಬೈ ಪಟ್ಟಣದೊಂದಿಗೆ ನೇರವಾದ ಬಸ್ಸು ಸಂಪರ್ಕವಿದೆ. ನೀವು ಸಹ ಒಮ್ಮೆ ಹೋಗಿ ಬನ್ನಿ ಅಲ್ಲಿನ ಪ್ರಕ್ಱುತಿ ತುಂಬಾ ಸುಂದರ ಎಲ್ಲಿ ನೋಡಿದರೂ ಹಚ್ಚ ಹಸಿರು.....
 | 
  
ಉತ್ತರ: ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ  ಅನು ಅವರಿಂದ; ಸಮಯ: 7/30/2008 5:43 PM
ಮಲೆನಾಡ ಪ್ರಕೃತಿ ತುಂಬ ಸೊಗಸಾಗಿದೆ. <br>ಜೋಗ ಜಲಪಾತ ನಿಜಕ್ಕೂ ಕರ್ನಾಟಕದ‌ ಹೆಮ್ಮೆ.<br>ಇಂತ ನಾಡಲ್ಲಿರುವ ನಾವೇ ಧನ್ಯರು.

ಉತ್ತರ: ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ  ಭಾಸ್ಕರ‌ ಅವರಿಂದ; ಸಮಯ: 8/1/2008 2:03 PM
ನಾಗರಾಜ್ ರವರೆ, ನಿಮ್ಮ ಲೇಖನ ಓದಿ, 2 ವರ್ಷಗಳ ಕೆಳಗೆ ಸಾಗರ ಮತ್ತು ಜೋಗ್ ಜಲಪಾತಕ್ಕೆ ಭೇಟಿ ನೀಡಿದ್ದ ದಿನಗಳು ನೆನಪಾಯಿತು! ಆಗ ಮಳೆಗಾಲ ಬೇರೆ! ಜೋಗದ ತಳಬಾಗದವರೆಗೂ ಇಳಿದು, "ಮುಂಗಾರು ಮಳೆ" ಶೂಟಿಂಗ್ ಮಾಡಿದ ಜಾಗದಲ್ಲಿ ನಿಂತು ನೋಡಿದ್ದು.....

ಉತ್ತರ: ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ  ಆಶಾ ಅವರಿಂದ; ಸಮಯ: 8/10/2008 12:06 PM
ನಾಗರಾಜ್ ರವರೆ , ಇನ್ನು ಹೆಚ್ಚೆಚ್ಚು ಲೇಖನಗಳನ್ನು ಬರೆಯಿರಿ .<br>ಎಲ್ಲರೂ ನಿಮ್ಮ ಲೇಖನಕ್ಕಾಗಿ ನಿರೀಕ್ಷಿಸುತ್ತಿದ್ದಾರೆ.


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:3
ಸದಸ್ಯರುಸದಸ್ಯರು:0
ಒಟ್ಟುಒಟ್ಟು:3

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use