ಸದಸ್ಯರಾಗಿ  ಲಾಗಿನ್
ನೀವಿರುವ ಸ್ಥಳ: ಬ್ಲಾಗ್
ಸೂಚನೆ: ಸುಮ್ನೆ ಬ್ಲಾಗ್ ಕೇವಲ ಕನ್ನಡದ ಪ್ರಚಾರಕ್ಕಾಗಿ ಸೄಷ್ಟಿಸಿರುವ ಒಂದು ವೇದಿಕೆ.  ದಯವಿಟ್ಟು ಅನ್ಯ ಭಾಷೆಯನ್ನು ಈ ತಾಣದಲ್ಲಿ ಉಪಯೋಗಿಸಬಾರದು.  ಸರ್ವರೂ ಸಹಕರಿಸಬೇಕೆಂದು ಕೋರಲಾಗಿದೆ.
ಸವಿ ಮಾತು...

ಆಡಿದ ಮಾತು, ಬಿಟ್ಟ ಬಾಣ, ಗತಿಸಿಹೋದ ಕಾಲ ಇವು ಹಿಂತಿರುಗಿ ಬರುವುದಿಲ್ಲ. 

 Print   
ಕರ್ನಾಟಕದ ಜಾನಪದ
ಸ್ಥಳ: ಬ್ಲಾಗ್ಸ್ನನಗೆ ತೋಚಿದ್ದು   
ಬರಹಗಾರ: ನಾಗರಾಜ್ megarajnaga7/23/2008 5:38 PM
ಬೆಳಗಾಗಿ ನಾನೆದ್ದು ಯಾರ್ ಯಾರ ನೆನೆಯಾಲಿ
ಎಳ್ಳು ಜೀರಿಗೆ ಬೆಳಿಯೋ ಭೂಮಿತಾಯಿ
ಎದ್ದೊಂದು ಗಳಿಗೆ ನೆನೆದೇನು
ಮಣ್ಣಲ್ಲಿ ಹುಟ್ಟೋಳೆ ಮಣ್ಣಾಲಿ ಬೆಳೆವೋಳೆ
ಎಣ್ಣೇಲಿ ಕಣ್ಣಾಬಿಡುವೋಳೆ, ಜಗಜ್ಯೋತಿ
ಸತ್ಯಾದಿಂದುರಿಯೆ ನಮಗಾಗಿ
ತೊಟ್ಟಿಲು ಹೋತ್ಕೊಂಡು ತವರ್ಬಣ್ಣ ಉಟ್ಕೊಂಡು
ಅಪ್ಪ ಕೊಟ್ಟೆಮ್ಮೆ ಹೋಡ್ಕೊಂಡು | ತೌರೂರ
ತಿಟ್ಟಹತ್ತಿ ತಿರುಗಿ ನೋಡ್ಯಾಳೊ
ಹೂಮಾಲೆಯಂಥ ಮೇಲಿನ ಸಾಲುಗಳನ್ನು ಯಾರು ಯಾವಾಗ ಬರೆದರೋ ಗೊತ್ತಿಲ್ಲ, ಇವು ನೂರಾರು ವರ್ಷಗಳಿಂದ ಸಾವಿರಾರು ಜನಗಳ ಬಾಯಿಂದ ಹರಿದು ಬಂದ ನುಡಿಗಳು, ನಮ್ಮ ಹಳ್ಳಿಗಳಲ್ಲಿ ಕಲೋಪಾಸಕತ್ವವನ್ನು, ಸೃಜನಶೀಲತೆಯನ್ನು, ಮತ್ತು ಮಾಧುರ್ಯವನ್ನು ಹಳ್ಳಿಗರಿಗೆ ತಿಳಿಯದಂತೆ ಅವರ ಜೀವನ ವಿಧಾನವನ್ನಾಗಿ ಪರಿವರ್ತಿಸಿದ ಸಂಸ್ಕೃತಿಯೊಂದರ ಹೆಜ್ಜೆಗುರುತುಗಳು.
ಪ್ರಾಯಶಃ ಸಹಸ್ರಾರು ವರ್ಷದ ಹಿಂದೆ ಜಗತ್ತಿನಲ್ಲೆಲ್ಲ ಇದ್ದುದ್ದು ಜಾನಪದವೊಂದೇ, ಮಾನವನು ತಾನು ಮಾಡುವ ಕೆಲಸಗಳಲ್ಲೆಲ್ಲಾ ತನ್ಮಯತೆಯನ್ನು ತುಂಬಲು ಮಾಡಿದ ಪ್ರಯತ್ನಗಳ ಸರಮಾಲೆಯೇ ಜಾನಪದವಾಗಿರಬಹುದು. ತನ್ನ ಸುತ್ತಲಿನ ಪರಿಸ್ಥಿತಿಗೆ ತಕ್ಕಂತೆ ತಂತ್ರಜ್ಞಾನಗಳನ್ನೂ, ಅರೋಗ್ಯ ರಕ್ಷಣೆಗೆ ವೈದ್ಯಕೀಯವನ್ನು, ಪ್ರಕೃತಿಯ ಬಿರುಸಿಗೆ ಉತ್ತರವಾಗಿ ಭಕ್ತಿಯನ್ನೂ ಬೆಳೆಸಿಕೊಂಡಿರಬಹುದು.
ಜನಪದ ಮತ್ತು ಜಾನಪದ ಎಂಬ ಶಬ್ದಗಳು ಒಂದು ಸಾಮಾಜಿಕ ವ್ಯವಸ್ಥೆಯನ್ನು ಸೂಚಿಸುತ್ತವೆ. ಪ್ರತಿಯೊಂದು ಸಾಮಾಜವೂ ತನ್ನ ಪುರಾತನರ ಸಾರವನ್ನು ಹೀರಿ ತನ್ನ ಸದ್ಯದ ಬದುಕಿಗೊಂದು ಅರ್ಥವನ್ನೂ, ತನ್ನ ಸದ್ಯದ ಸಮಸ್ಯೆಗಳಿಗೊಂದು ಪರಿಹಾರವನ್ನೂ, ತನ್ನ ಭಕ್ತಿಗೊಂದು ರೂಪವನ್ನೂ - ಕಲೆ, ತಂತ್ರಜ್ಞಾನ ಇತ್ಯಾದಿಗಳ ಬೆಳವಣಿಗೆಯನ್ನೂ ಸಾಮುದಾಯಿಕವಾಗಿ ನಿರ್ವಹಿಸುತ್ತದೆ. ಇದು ಯಾವುದೇ ಅಧಿಕಾರದ, ಸಂಪ್ರದಾಯದ ಪೋಷಣೆಯಿಲ್ಲದೇ ತನ್ನಿಂದ ತಾನೇ ಹರಿದು ಬಂದು ಮಣ್ಣಿನ ಸಂಸ್ಕೃತಿಯ ಸಾರವಾಗಿ 'ಜಾನಪದ' ಎನ್ನಿಸಿಕೊಂಡಿದೆ.
ಕರ್ನಾಟಕದಲ್ಲಿ ಸಾವಿರಾರು ವರ್ಷಗಳಿಂದ ಹರಿದುಬಂದ ಜಾನಪದ ಜ್ಞಾನವಿದೆ, ಇದನ್ನು ಹಲವಾರು ಪ್ರಭೇದಗಳಲ್ಲಿ ವಿಂಗಡಿಸಬಹುದು.
Copyright ©2008 ನಾಗರಾಜ್ megarajnaga
 | 
  
ಉತ್ತರ: ಕರ್ನಾಟಕದ ಜಾನಪದ  ಅನು ಅವರಿಂದ; ಸಮಯ: 7/24/2008 3:49 PM
ಆದರೆ ಈಗಿನ ವಿದ್ಯಮಾನಗಳಲ್ಲಿ ಇಂತಹ ಕಲೆಗಳಿಗೆ ಸರಿಯಾದ ಮಾನ್ಯತೆ ಸಿಗುತ್ತಿಲ್ಲ ಮತ್ತು ಜನ <br>ಪ್ಪಾಶ್ಚಾತ್ಯ ಕಲೆಗಳನ್ನು ನೆಚ್ಛಿಕೊಂಡು ಇವುಗಳನ್ನು ಮರೆಯುತ್ತಿದ್ದಾನೆ , ಆದ್ದರಿಂದ ಇಂತಹ ಕಲೆಗಳ ಬಗ್ಗೆ ಸಾಕಷ್ತು ಪ್ರಚಾರ ಕೊಟ್ಟು ಈ ಕಲೆಗಳನ್ನು ಉಳಿಸುವುದು ಬಹು ಮುಖ್ಯವಾಗುತ್ತದೆ.

ಉತ್ತರ: ಕರ್ನಾಟಕದ ಜಾನಪದ  ಪ್ರ ಸನ್ನ ಅವರಿಂದ; ಸಮಯ: 7/30/2008 4:42 PM
ಜನಪದ ಕಲೆಗಳನ್ನು ಉಳಿಸಲು ಪ್ರೋತ್ಸಾಹಿಸಲು ಸರ್ಕಾರ ಮತ್ತು ಸಾರ್ವಜನಿಕರು ಕೈ ಜೋಡಿಸಬೇಕು.


ನಿಮ್ಮ ಹೆಸರು:
ಶೀರ್ಷಿಕೆ:
ಅಭಿಪ್ರಾಯ:
ಅಭಿಪ್ರಾಯ ಬರೆಯಿರಿ   ಇದು ಬೇಡ 

  
ನನ್ನ ಬ್ಲಾಗ್
ನೀವು ಬ್ಲಾಗ್ ಬರೆಯಬೆಕಾದರೆ ಲಾಗಿನ್ (login) ಮಾಡಬೇಕು
 Print   
ಇಮೇಲ್ ಬ್ಲಾಗ್
 Print   
ಪ್ರಶ್ನೆ
 Print   
ನಮ್ಮ ವಿಡಿಯೋ
 Print   
ಸದಸ್ಯರು
ಸದಸ್ಯತ್ವಸದಸ್ಯತ್ವ:
ಇತ್ತೀಚಿನ ಹೊಸ ಸದಸ್ಯಇತ್ತೀಚಿನ ಸದಸ್ಯರು:tharakeshwar
ಇಂದಿನ ಸದಸ್ಯರುಇಂದಿನ ಹೊಸ ಸದಸ್ಯರು:0
ನೆನ್ನೆಯ ಸದಸ್ಯರುನೆನ್ನೆಯ ಹೊಸ ಸದಸ್ಯರು:1
ಸದಸ್ಯರ ಅಕೌಂಟ್ಒಟ್ಟು:194

 ಆನ್‌ಲೈನ್ ಇರುವ ಸದಸ್ಯರು ಆನ್‌ಲೈನ್ ಇರುವ ಸದಸ್ಯರು:
ಅತಿಥಿಗಳುಅತಿಥಿಗಳು:4
ಸದಸ್ಯರುಸದಸ್ಯರು:0
ಒಟ್ಟುಒಟ್ಟು:4

ಈಗ ಆನ್‌ಲೈನ್ಈಗ ಆನ್‌ಲೈನ್ ಇರುವವರು:
 Print   

ಕನ್ನಡಕ್ಕಾಗಿ ನಾವು ಮಾಡುತ್ತಿರುವ ಅಳಿಲು ಸೇವೆಗೆ ನೀವೂ ಕೈಜೋಡಿಸಿ.

© SUMNE' S ENTERPRISES   |  Privacy Statement  |  Terms Of Use